ಪ್ರಾತಿನಿಧಿಕ ಚಿತ್ರ
ನವದೆಹಲಿ: ಪ್ರಸಕ್ತ ವರ್ಷದ ಜನವರಿಯಲ್ಲಿ ದೇಶದ ಚಿನ್ನದ ಆಮದು ಪ್ರಮಾಣದಲ್ಲಿ ಶೇ 40.79ರಷ್ಟು ಏರಿಕೆಯಾಗಿದೆ. ಒಟ್ಟು ₹23,300 ಕೋಟಿ ಮೌಲ್ಯದ ಚಿನ್ನವನ್ನು ಆಮದು ಮಾಡಿಕೊಳ್ಳಲಾಗಿದೆ.
ಕಳೆದ ವರ್ಷದ ಜನವರಿಯಲ್ಲಿ ಭಾರತವು ₹16,500 ಕೋಟಿ ಮೌಲ್ಯದ ಹಳದಿ ಲೋಹವನ್ನು ಆಮದು ಮಾಡಿಕೊಂಡಿತ್ತು. ದೇಶೀಯ ಮಟ್ಟದಲ್ಲಿ ಹೆಚ್ಚಿದ ಬೇಡಿಕೆಯಿಂದಾಗಿ ಆಮದು ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ತಿಳಿಸಿದೆ.
ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌ನಿಂದ ಜನವರಿವರೆಗೆ ಒಟ್ಟು ₹4.34 ಲಕ್ಷ ಕೋಟಿ ಮೌಲ್ಯದ ಚಿನ್ನ ಆಮದಾಗಿದೆ. ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹3.29 ಲಕ್ಷ ಕೋಟಿ ಮೌಲ್ಯದ ಚಿನ್ನವನ್ನು ಆಮದು ಮಾಡಿಕೊಳ್ಳಲಾಗಿತ್ತು. ಇದಕ್ಕೆ ಹೋಲಿಸಿದರೆ ಆಮದು ಪ್ರಮಾಣದಲ್ಲಿ ಶೇ 32ರಷ್ಟು ಏರಿಕೆಯಾಗಿದೆ.
ಈ ವರ್ಷದ ಆರಂಭದಿಂದ ಇಲ್ಲಿಯವರೆಗೆ ಚಿನ್ನದ ಬೆಲೆಯಲ್ಲಿ ಶೇ 11ರಷ್ಟು ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.