ADVERTISEMENT

ಚಿನ್ನದ ದರ ₹1,130, ಬೆಳ್ಳಿ ₹1,100 ಏರಿಕೆ

ಪಿಟಿಐ
Published 21 ಮಾರ್ಚ್ 2024, 15:19 IST
Last Updated 21 ಮಾರ್ಚ್ 2024, 15:19 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಏರಿಕೆ ಆಗಿದ್ದು, ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಗುರುವಾರ ತಲುಪಿದೆ. 

ಚಿನ್ನದ ದರವು 10 ಗ್ರಾಂಗೆ ₹1,130 ಏರಿಕೆಯಾಗಿದ್ದು, ₹67,450ಕ್ಕೆ ಮಾರಾಟವಾಯಿತು. ಬೆಳ್ಳಿ ಧಾರಣೆಯು ಪ್ರತಿ ಕೆ.ಜಿಗೆ ₹1,100 ಹೆಚ್ಚಳವಾಗಿದೆ. ಸದ್ಯ ಒಂದು ಕೆ.ಜಿಗೆ ₹77,750 ದರವಿದೆ.

ADVERTISEMENT

ಅಮೆರಿಕದ ಫೆಡರಲ್‌ ರಿಸರ್ವ್‌ ಬ್ಯಾಂಕ್‌ ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿರುವುದೇ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆ ವಿಶ್ಲೇಷಕರು ತಿಳಿಸಿದ್ದಾರೆ. 

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,202 ಡಾಲರ್‌ ಮತ್ತು 25.51 ಡಾಲರ್‌ನಂತೆ ಮಾರಾಟವಾಗಿವೆ.

‘ಜಾಗತಿಕ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಏರಿಕೆ ಕಂಡಿದೆ. ಇದು ದೇಶೀಯ ಮಾರುಕಟ್ಟೆ ಮೇಲೂ ಪರಿಣಾಮ ಬೀರಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ದಿಲೀಪ್‌ ಪರ್ಮಾರ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.