ADVERTISEMENT

ಚಿನ್ನದ ದರ ₹ 723 ಜಿಗಿತ

ಪಿಟಿಐ
Published 8 ಜುಲೈ 2020, 14:21 IST
Last Updated 8 ಜುಲೈ 2020, 14:21 IST
ಚಿನ್ನ
ಚಿನ್ನ   

ನವದೆಹಲಿ: ದೇಶದಾದ್ಯಂತ ಬುಧವಾರ ಚಿನ್ನದ ಧಾರಣೆಯಲ್ಲಿ ಏರಿಕೆ ಕಂಡುಬಂದಿದೆ. ದೆಹಲಿಯಚಿನಿವಾರ ಪೇಟೆಯಲ್ಲಿ ಚಿನ್ನದ ಧಾರಣೆ 10ಗ್ರಾಂಗೆ ₹ 723ರಂತೆ ಏರಿಕೆಯಾಗಿ ₹ 49,898ರಂತೆ ಮಾರಾಟವಾಯಿತು.ಮಂಗಳವಾರ 10ಗ್ರಾಂ ಚಿನ್ನ ₹ 49,175ರಂತೆ ಮಾರಾಟವಾಗಿತ್ತು.

ಮುಂಬೈನಲ್ಲಿ 10ಗ್ರಾಂಗೆ ₹ 675ರಂತೆ ಹೆಚ್ಚಾಗಿ ₹ 48,925ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಹಾಗೂ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ ಇಳಿಕೆಯಿಂದಾಗಿ ದೇಶಿ ಚಿನಿವಾರ ಪೇಟೆಯಲ್ಲಿ ಚಿನ್ನದ ಧಾರಣೆ ಏರಿಕೆಯಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ADVERTISEMENT

‘ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಹೂಡಿಕೆದಾರರು ಸುರಕ್ಷಿತ ಬಂಡವಾಳ ಹೂಡಿಕೆಯತ್ತ ಗಮನ ಹರಿಸಿದ್ದಾರೆ. ಹೀಗಾಗಿ ಚಿನ್ನದ ದರ ಹೆಚ್ಚಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್‌ ಪಟೇಲ್‌ ಹೇಳಿದ್ದಾರೆ.

ಬೆಳ್ಳಿ ಧಾರಣೆ ಕೆ.ಜಿಗೆ ₹ 104 ರಂತೆ ಇಳಿಕೆಯಾಗಿ ₹ 50,416ರಲ್ಲಿ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.