ADVERTISEMENT

ಪ್ರತೀ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹1,025 ಏರಿಕೆ

ಪಿಟಿಐ
Published 5 ಏಪ್ರಿಲ್ 2023, 10:59 IST
Last Updated 5 ಏಪ್ರಿಲ್ 2023, 10:59 IST
   

ನವದೆಹಲಿ: ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ಏರಿಕೆ ಕಂಡಿದ್ದು, ಪ್ರತಿ 10 ಗ್ರಾಂ ಮೇಲೆ ₹1,025 ಹೆಚ್ಚಳವಾಗಿದೆ. ಈ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆ ₹61,080ರಷ್ಟಾಗಿದೆ.

ವಿದೇಶಿ ಮಾರುಕಟ್ಟೆಯ ಬೆಲೆ ಏರಿಕೆಗೆ ಅನುಗುಣವಾಗಿ ದೇಶಿಯ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆ ಏರಿಕೆ ಕಂಡಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹೇಳಿದೆ.

ಮಂಗಳವಾರದ ವಹಿವಾಟು ಅಂತ್ಯಕ್ಕೆ 10 ಗ್ರಾಂ ಚಿನ್ನದ ಬೆಲೆ ₹60,055 ಆಗಿತ್ತು.

ADVERTISEMENT

ಬೆಳ್ಳಿಯ ಬೆಲೆ ಸಹ ₹1,810ರಷ್ಟು ಹೆಚ್ಚಳವಾಗಿದ್ದು, ಪ್ರತಿ ಕೆ.ಜಿ ಬೆಳ್ಳಿ ಬೆಲೆ ₹73,950 ಆಗಿದೆ.

‘ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ₹61,000 ದಾಟಿರುವುದು ಹೊಸ ಸಾರ್ವಕಾಲಿಕ ಹೆಚ್ಚಳವಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಹೇಳಿದ್ದಾರೆ.

ವಿದೇಶಿ ಮಾರುಕಟ್ಟೆಯಲ್ಲಿ ಪ್ರತಿ ಔನ್ಸ್‌ ಚಿನ್ನ ಮತ್ತು ಬೆಳ್ಳಿ ಬೆಲೆ ಕ್ರಮವಾಗಿ 2,027 ಡಾಲರ್ ಮತ್ತು 24.04 ಡಾಲರ್‌ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.