ADVERTISEMENT

ಚಿನ್ನ ₹ 209, ಬೆಳ್ಳಿ ₹ 617ರಷ್ಟು ಹೆಚ್ಚಳ

ಪಿಟಿಐ
Published 16 ಡಿಸೆಂಬರ್ 2021, 12:47 IST
Last Updated 16 ಡಿಸೆಂಬರ್ 2021, 12:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ, ಬೆಳ್ಳಿ ಧಾರಣೆ ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ ₹ 209ರಷ್ಟು ಹೆಚ್ಚಾಗಿ ₹ 47,405ಕ್ಕೆ ತಲುಪಿದೆ.

ಬೆಳ್ಳಿ ಧಾರಣೆ ಕೆ.ಜಿ.ಗೆ ₹ 617ರಷ್ಟು ಹೆಚ್ಚಾಗಿ ₹ 60,179ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಉಂಟಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.