ADVERTISEMENT

ಚಿನ್ನ ₹350, ಬೆಳ್ಳಿ ₹650 ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 2 ಜೂನ್ 2023, 15:25 IST
Last Updated 2 ಜೂನ್ 2023, 15:25 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ 10ಗ್ರಾಂಗೆ ₹350 ಹೆಚ್ಚಾಗಿ ₹60,600ರಂತೆ ಮಾರಾಟ ಆಯಿತು. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಬೆಳ್ಳಿ ಧಾರಣೆ ಕೆ.ಜಿಗೆ ₹650ರಂತೆ ಏರಿಕೆ ಕಂಡು ₹73,550ಕ್ಕೆ ತಲುಪಿತು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಗರಿಷ್ಠ ಮಟ್ಟದಲ್ಲಿಯೇ ಇದೆ. ಚಿನ್ನದ ದರ ಒಂದು ಔನ್ಸ್‌ಗೆ (28.34 ಗ್ರಾಂ) 1,976 ಡಾಲರ್ ಮತ್ತು ಬೆಳ್ಳಿ ಒಂದು ಔನ್ಸ್‌ಗೆ 23.84 ಡಾಲರ್‌ಗೆ ತಲುಪಿದೆ.

ಅಮೆರಿಕದ ಡಾಲರ್‌ ಮೌಲ್ಯ ಇಳಿಕೆ ಮತ್ತು ಅಮೆರಿಕದ ಫೆಡರಲ್ ರಿಸರ್ವ್‌ ಹಣಕಾಸು ನೀತಿಯನ್ನು ಬಿಗಿಗೊಳಿಸುವ ಪ್ರವೃತ್ತಿಗೆ ತಡೆ ನೀಡಿರುವುದು ಚಿನ್ನದ ದರವನ್ನು ಹೆಚ್ಚಾಗುವಂತೆ ಮಾಡಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್‌ ಗಾಂಧಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.