ADVERTISEMENT

ಚಿನ್ನದ ದರ: ಸಾರ್ವಕಾಲಿಕ ಗರಿಷ್ಠ

ಪಿಟಿಐ
Published 22 ಜನವರಿ 2025, 16:05 IST
Last Updated 22 ಜನವರಿ 2025, 16:05 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಚಿನ್ನದ ದರವು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಮುಟ್ಟಿದೆ.

ಚಿನ್ನದ ದರವು 10 ಗ್ರಾಂಗೆ (ಶೇ 99.9 ಪರಿಶುದ್ಧತೆ) ₹630 ಏರಿಕೆಯಾಗಿದ್ದು, ₹82,730ಕ್ಕೆ ಮಾರಾಟವಾಗಿದೆ. ಆಭರಣ ಚಿನ್ನದ ಬೆಲೆಯು (ಶೇ 99.5 ಪರಿಶುದ್ಧತೆ) ಇಷ್ಟೇ ಪ್ರಮಾಣದಲ್ಲಿ ಏರಿಕೆಯಾಗಿದ್ದು ₹82,330 ಆಗಿದೆ.

ADVERTISEMENT

ಸತತ ಆರು ವಹಿವಾಟುಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆಯಾಗಿದೆ.

ಆಭರಣ ವ್ಯಾಪಾರಿಗಳು ಮತ್ತು ಚಿಲ್ಲರೆದಾರರಿಂದ ಖರೀದಿ ಹೆಚ್ಚಳದಿಂದಾಗಿ ಚಿನ್ನದ ಧಾರಣೆಯಲ್ಲಿ ಏರಿಕೆಯಾಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್‌ ತಿಳಿಸಿದೆ.

ಕಳೆದ ವರ್ಷದ ಅಕ್ಟೋಬರ್‌ 31ರಂದು 10 ಗ್ರಾಂ ಚಿನ್ನದ ದರವು ₹82,400ಕ್ಕೆ ತಲುಪಿದ್ದು, ಇಲ್ಲಿಯವರೆಗಿನ ಗರಿಷ್ಠ ದಾಖಲಾಗಿತ್ತು.

ಬೆಳ್ಳಿ ಧಾರಣೆಯು ಕೆ.ಜಿಗೆ ₹1 ಸಾವಿರ ಏರಿಕೆಯಾಗಿದ್ದು, ₹94 ಸಾವಿರ ಆಗಿದೆ.

‘ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ವ್ಯಾಪಾರ ನೀತಿಯು ಅನಿಶ್ಚಿತತೆಯಿಂದ ಕೂಡಿದೆ. ಇದು ಹಳದಿ ಲೋಹದ ಬೆಲೆ ಏರಿಕೆಗೆ ಕಾರಣವಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್‌ ಗಾಂಧಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.