ADVERTISEMENT

ಚಿನ್ನ– ಬೆಳ್ಳಿ ಮತ್ತೆ ದುಬಾರಿ | ₹70 ಸಾವಿರ ದಾಟಿದ ಚಿನ್ನದ ದರ

ಪಿಟಿಐ
Published 4 ಏಪ್ರಿಲ್ 2024, 14:19 IST
Last Updated 4 ಏಪ್ರಿಲ್ 2024, 14:19 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಮತ್ತೆ ಚಿನ್ನ ಹಾಗೂ ಬೆಳ್ಳಿ ದರ ಏರಿಕೆಯಾಗಿದ್ದು, ಸಾರ್ವಕಾಲಿಕ ಗರಿಷ್ಠಕ್ಕೆ ಮುಟ್ಟಿದೆ. ಈ ವಾರದಲ್ಲಿ ಮೂರನೇ ಬಾರಿಗೆ ಹಳದಿ ಲೋಹದ ಬೆಲೆಯಲ್ಲಿ ಏರಿಕೆಯಾಗಿದೆ. 

ಚಿನ್ನದ ದರವು 10 ಗ್ರಾಂಗೆ ₹850 ಏರಿಕೆಯಾಗಿದ್ದು, ₹70,050ಕ್ಕೆ ಮಾರಾಟವಾಯಿತು. ಬೆಳ್ಳಿ ಧಾರಣೆಯು ಪ್ರತಿ ಕೆ.ಜಿಗೆ ₹1,000 ಹೆಚ್ಚಳವಾಗಿದೆ. ಪ್ರಸ್ತುತ ಒಂದು ಕೆ.ಜಿ ಬೆಳ್ಳಿ ಧಾರಣೆಯು ₹81,700ಕ್ಕೆ ತಲುಪಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ತಿಳಿಸಿದ್ದಾರೆ.‌

ADVERTISEMENT

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,297 ಡಾಲರ್‌ ಮತ್ತು 27.05 ಡಾಲರ್‌ನಂತೆ ಮಾರಾಟವಾಗಿದೆ.

ಅಮೆರಿಕದ ಫೆಡರಲ್‌ ರಿಸರ್ವ್‌ನ ಬಡ್ಡಿದರ ಕಡಿತದ ಅನಿಶ್ಚಿತತೆ ನಡುವೆಯೇ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡಾಲರ್‌ ಮೌಲ್ಯ ದುರ್ಬಲಗೊಳ್ಳುತ್ತಿದೆ. ಇದರಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಯತ್ತ ಮುಖ ಮಾಡಿದ್ದಾರೆ. ಹಾಗಾಗಿ, ಚಿನ್ನದ ದರವು ಏರಿಕೆಯತ್ತ ಸಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ದರವು ₹72,190ಕ್ಕೆ ಮುಟ್ಟಿದ್ದರೆ, ಒಂದು ಕೆ.ಜಿ ಬೆಳ್ಳಿಯು ₹81,200 ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.