ADVERTISEMENT

ಚಿನ್ನದ ದರ 10 ಗ್ರಾಂಗೆ ₹ 883 ಹೆಚ್ಚಳ, ಬೆಳ್ಳಿ ಕೆ.ಜಿಗೆ ₹ 1,890 ಏರಿಕೆ

ಪಿಟಿಐ
Published 11 ನವೆಂಬರ್ 2021, 17:07 IST
Last Updated 11 ನವೆಂಬರ್ 2021, 17:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ, ಬೆಳ್ಳಿ ದರದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಚಿನ್ನದ ದರ 10 ಗ್ರಾಂಗೆ ₹ 883ರಷ್ಟು ಹೆಚ್ಚಾಗಿ ₹ 48,218ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,890ರಷ್ಟು ಏರಿಕೆ ಕಂಡು ₹ 65,190ಕ್ಕೆ ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಮತ್ತು ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಇಳಿಕೆಯ ಕಾರಣಗಳಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT