ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ದರ 10 ಗ್ರಾಂಗೆ ₹ 438ರಷ್ಟು ಏರಿಕೆಯಾಗಿ ₹ 46,214ರಂತೆ ಮಾರಾಟವಾಯಿತು. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 633ರಷ್ಟು ಹೆಚ್ಚಾಗಿ ₹ 62,140ಕ್ಕೆ ತಲುಪಿತು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪ್ರಭಾವ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.