ADVERTISEMENT

ಚಿನ್ನದ ದರ ₹230, ಬೆಳ್ಳಿ ₹400 ಇಳಿಕೆ

ಪಿಟಿಐ
Published 3 ಜನವರಿ 2024, 14:25 IST
Last Updated 3 ಜನವರಿ 2024, 14:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ : ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ ಮತ್ತು ಬೆಳ್ಳಿ ದರ ಇಳಿಕೆ ಆಗಿದೆ. ಚಿನ್ನದ ದರ 10 ಗ್ರಾಂ.ಗೆ ₹230 ಇಳಿಕೆಯಾಗಿ, ₹63,970ರಂತೆ ಮಾರಾಟವಾಯಿತು.

ಬೆಳ್ಳಿ ಧಾರಣೆ ಕೆ.ಜಿಗೆ ₹400 ಕಡಿಮೆಯಾಗಿ, ₹78,400 ತಲುಪಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿದ್ದು, ದೇಶೀಯ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್‌ ಗಾಂಧಿ ಹೇಳಿದ್ದಾರೆ. 

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,059 ಡಾಲರ್‌ ಮತ್ತು 23.60 ಡಾಲರ್‌ನಂತೆ ಮಾರಾಟವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.