ADVERTISEMENT

ಚಿನ್ನ, ಬೆಳ್ಳಿ ದರ ಇಳಿಕೆ

ಪಿಟಿಐ
Published 16 ಅಕ್ಟೋಬರ್ 2023, 16:29 IST
Last Updated 16 ಅಕ್ಟೋಬರ್ 2023, 16:29 IST
   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನ, ಬೆಳ್ಳಿ ದರ ಇಳಿಕೆ ಕಂಡಿತು. ಚಿನ್ನದ ದರ 10 ಗ್ರಾಂಗೆ ₹350ರಷ್ಟು ಇಳಿಕೆ ಕಂಡು ₹60,150ರಂತೆ ಮಾರಾಟ ಆಯಿತು. ಬೆಳ್ಳಿ ಧಾರಣೆ ಕೆ.ಜಿಗೆ ₹300 ಇಳಿಕೆ ಕಂಡು ₹74 ಸಾವಿರಕ್ಕೆ ತಲುಪಿತು. 

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ ಇಳಿಕೆ ಕಂಡಿದ್ದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಒಂದು ಔನ್ಸ್‌ಗೆ (28.34 ಗ್ರಾಂ) 1,912 ಡಾಲರ್‌ ಮತ್ತು ಬೆಳ್ಳಿ ಒಂದು ಔನ್ಸ್‌ಗೆ 22.50 ಡಾಲರ್‌ನಂತೆ ಮಾರಾಟ ಆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.