
ಚಿನ್ನ, ಬೆಳ್ಳಿ
(ಸಾಂದರ್ಭಿಕ ಚಿತ್ರ)
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ದರ ಇಳಿಕೆಯಾಗಿದೆ, ಬೆಳ್ಳಿ ಬೆಲೆ ಹೆಚ್ಚಳವಾಗಿದೆ.
10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹640ರಷ್ಟು ಕಡಿಮೆಯಾಗಿ, ₹1,29,460ರಂತೆ ಮಾರಾಟವಾಗಿದೆ. ಆಭರಣ ಚಿನ್ನದ (ಶೇ 99.5ರಷ್ಟು ಪರಿಶುದ್ಧತೆ) ಬೆಲೆ ಇಷ್ಟೇ ಪ್ರಮಾಣದಲ್ಲಿ ಇಳಿಕೆಯಾಗಿ, ₹1,28,860 ಆಗಿದೆ.
ಆದರೆ, ಬೆಳ್ಳಿ ದರವು ಕೆ.ಜಿಗೆ ₹5,100 ಹೆಚ್ಚಳವಾಗಿ, ₹1,68,200 ಆಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
‘ರಷ್ಯಾ ಮತ್ತು ಉಕ್ರೇನ್ ನಡುವೆ ಶಾಂತಿ ಒಪ್ಪಂದ ಆಗುವ ನಿರೀಕ್ಷೆ ಇದೆ. ಇದು ಜಾಗತಿಕ ರಾಜಕೀಯ ಬಿಕ್ಕಟ್ಟು ಕಡಿಮೆ ಆಗುವ ನಿರೀಕ್ಷೆ ಮೂಡಿಸಿದೆ. ಅಲ್ಲದೆ, ಲಾಭದ ಗಳಿಕೆಗಾಗಿ ಹೂಡಿಕೆದಾರರು ಚಿನ್ನದ ಮಾರಾಟಕ್ಕೆ ಮುಂದಾಗಿದ್ದರಿಂದ ಹಳದಿ ಲೋಹದ ದರ ಇಳಿಕೆ ಆಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.