ADVERTISEMENT

Gold & Silver price: ಚಿನ್ನದ ದರ ಇಳಿಕೆ, ಬೆಳ್ಳಿ ಏರಿಕೆ

ಪಿಟಿಐ
Published 16 ಅಕ್ಟೋಬರ್ 2025, 14:04 IST
Last Updated 16 ಅಕ್ಟೋಬರ್ 2025, 14:04 IST
   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಚಿನ್ನದ ದರ ಇಳಿಕೆಯಾಗಿದೆ, ಬೆಳ್ಳಿ ಧಾರಣೆ ಏರಿಕೆ ಕಂಡಿದೆ.

10 ಗ್ರಾಂ ಚಿನ್ನದ ದರವು (ಶೇ 99.9ರಷ್ಟು ಪರಿಶುದ್ಧತೆ) ₹200ರಷ್ಟು ಇಳಿಕೆಯಾಗಿ, ₹1,31,600ರಂತೆ ಮಾರಾಟವಾಗಿದೆ. ಆಭರಣ ಚಿನ್ನದ (ಶೇ 99.5ರಷ್ಟು ಪರಿಶುದ್ಧತೆ) ಬೆಲೆಯು ಇಷ್ಟೇ ಪ್ರಮಾಣದಲ್ಲಿ ಕಡಿಮೆಯಾಗಿ, ₹1.31 ಲಕ್ಷ ಆಗಿದೆ. ಆದರೆ, ಬೆಳ್ಳಿ ಧಾರಣೆ ಕೆ.ಜಿಗೆ ₹2 ಸಾವಿರ ಏರಿಕೆಯಾಗಿ, ₹1.84 ಲಕ್ಷ ಆಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

ಲಾಭದ ಗಳಿಕೆಗಾಗಿ ವ್ಯಾಪಾರಿಗಳು ಚಿನ್ನದ ಮಾರಾಟಕ್ಕೆ ಮುಂದಾಗಿದ್ದರಿಂದ ಹಳದಿ ಲೋಹದ ದರ ಇಳಿಕೆಯಾಗಿದೆ ಎಂದು ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.