ಚಿನ್ನ
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು 10 ಗ್ರಾಂಗೆ ₹2,700ರಷ್ಟು ಏರಿಕೆ ಆಗಿದ್ದು, ಸಾರ್ವಕಾಲಿಕ ಗರಿಷ್ಠ ಮಟ್ಟವಾದ ₹1,18,900ಕ್ಕೆ ತಲುಪಿದೆ.
ಅಮೆರಿಕವು ಎಚ್–1ಬಿ ವೀಸಾ ಶುಲ್ಕವನ್ನು ಹೆಚ್ಚಿಸಿದ ನಂತರದಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಮತ್ತಷ್ಟು ಕುಸಿದಿದೆ. ಈ ನಡುವೆ ಸುರಕ್ಷಿತ ಹೂಡಿಕೆಯಾದ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದೆ.
ಶೇಕಡ 99.9ರಷ್ಟು ಪರಿಶುದ್ಧತೆಯ ಚಿನ್ನದ ಬೆಲೆಯು ಸೋಮವಾರದ ವಹಿವಾಟಿನ ಅಂತ್ಯದ ವೇಳೆಗೆ 10 ಗ್ರಾಂಗೆ ₹1,16,200 ಆಗಿತ್ತು.
ಶೇ 99.5ರಷ್ಟು ಪರಿಶುದ್ಧತೆಯು ಚಿನ್ನದ ಬೆಲೆಯು ₹2,650ರಷ್ಟು ಹೆಚ್ಚಳವಾಗಿ, ₹1,18,300ಕ್ಕೆ ತಲುಪಿದೆ ಎಂದು ಅಖಿಲ ಭಾರತ ಸರಾಫ್ ಒಕ್ಕೂಟ ತಿಳಿಸಿದೆ.
ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ತೀವ್ರವಾಗಿ ಕುಸಿದಿದ್ದು ಕೂಡ ಚಿನ್ನದ ಬೆಲೆ ಏರಿಕೆಗೆ ಕಾರಣವಾಯಿತು ಎಂದು ವರ್ತಕರು ತಿಳಿಸಿದ್ದಾರೆ.
ಮಂಗಳವಾರ ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹3,220ರಷ್ಟು ಹೆಚ್ಚಳವಾಗಿ ₹1,39,600ಕ್ಕೆ ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.