ADVERTISEMENT

ಚಿನ್ನದ ದರ ಏರಿಕೆ: ಆಭರಣ ಚಿನ್ನ 10 ಗ್ರಾಂಗೆ 1.12 ಲಕ್ಷ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 14:39 IST
Last Updated 11 ಸೆಪ್ಟೆಂಬರ್ 2025, 14:39 IST
<div class="paragraphs"><p>ಚಿನ್ನ, ಬೆಳ್ಳಿ </p></div>

ಚಿನ್ನ, ಬೆಳ್ಳಿ

   

ನವದೆಹಲಿ: ದೆಹಲಿಯ ಚಿನಿವಾರ ಪೇಟೆಯಲ್ಲಿ ಗುರುವಾರದ ವಹಿವಾಟಿನಲ್ಲಿ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹100 ಹೆಚ್ಚಳವಾಗಿ, ₹1,13,100ರಂತೆ ಮಾರಾಟವಾಗಿದೆ.

ಆಭರಣ ಚಿನ್ನದ (ಶೇ 99.5 ಪರಿಶುದ್ಧತೆ) ಬೆಲೆ ಇಷ್ಟೇ ಪ್ರಮಾಣದಲ್ಲಿ ಏರಿಕೆಯಾಗಿ, ₹1,12,600 ಆಗಿದೆ. ಇದು ಈವರೆಗಿನ ಗರಿಷ್ಠ ಮಟ್ಟ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

ADVERTISEMENT

ಕೇಂದ್ರೀಯ ಬ್ಯಾಂಕ್‌ಗಳಿಂದ ಚಿನ್ನದ ಖರೀದಿ ಹೆಚ್ಚಳ, ಬಡ್ಡಿ ದರ ಕಡಿತ ನಿರೀಕ್ಷೆ ಮತ್ತು ಸುಂಕದಿಂದ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಕಾರಣದಿಂದಾಗಿ ಚಿನ್ನದ ಧಾರಣೆ ಏರಿಕೆ ಆಗಿದೆ ಎಂದು ತಜ್ಞರು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.