ನವದೆಹಲಿ: ಇಲ್ಲಿನ ಚಿನಿವಾರಪೇಟೆಯಲ್ಲಿ ಸೋಮವಾರದ ವಹಿವಟಿನಲ್ಲಿ ಚಿನ್ನದ ಬೆಲೆಯಲ್ಲಿ ಪ್ರತಿ 10 ಗ್ರಾಂಗೆ ₹550 ಮತ್ತು ಬೆಳ್ಳಿ ಬೆಲೆಯಲ್ಲಿ ಪ್ರತಿ ಕೆ.ಜಿಗೆ ₹1,170 ಏರಿಕೆ ಕಂಡಿದೆ.
ಆಭರಣ ತಯಾರಕರು ಮತ್ತು ಚಿಲ್ಲರೆ ವ್ಯಾಪಾರಿಗಳು ಖರೀದಿಯಲ್ಲಿ ಹೆಚ್ಚು ಆಸಕ್ತಿ ತೋರಿದ್ದಾರೆ ಎಂದು ಅಖಿಲ ಭಾರತ ಸರಫಾ ಅಸೋಸಿಯೇಶನ್ ತಿಳಿಸಿದೆ.
10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹550 ಏರಿಕೆಯಾಗಿ ₹99,300ಕ್ಕೆ ತಲುಪಿದೆ.
10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ಶುಕ್ರವಾರ ₹98,750ಕ್ಕೆ ಕೊನೆಗೊಂಡಿತ್ತು. ಕಳೆದ ಬುಧವಾರದಿಂದ ಚಿನ್ನದ ಬೆಲೆಯಲ್ಲಿ ₹2,760 ಏರಿಕೆಯಾಗಿದೆ.
ಬೆಳ್ಳಿ ಬೆಲೆ ₹1,170 ಏರಿಕೆಯಾಗಿ, ಕೆ.ಜಿಗೆ ₹1,00,370 ಆಗಿದೆ. ಹಿಂದಿನ ವಹಿವಾಟಿನಲ್ಲಿ ಬೆಳ್ಳಿ ಬೆಲೆ ಕೆ.ಜಿಗೆ ₹99,200ಕ್ಕೆ ಕೊನೆಗೊಂಡಿತ್ತು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುರೋಪಿಯನ್ ಒಕ್ಕೂಟದ ಸರಕುಗಳ ಮೇಲೆ ಶೇ 50ರಷ್ಟು ಸುಂಕ ವಿಧಿಸುವುದನ್ನು ಮುಂದೂಡಿದ ನಂತರ ಮತ್ತು ಗಡುವನ್ನು ಜುಲೈ 9ಕ್ಕೆ ಬದಲಾಯಿಸಿದ ನಂತರ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಚಿನ್ನದ ಮೇಲೆ ಹೂಡಿಕೆಯ ಬೇಡಿಕೆ ಕುಸಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.