ADVERTISEMENT

ಚಿನ್ನದ ದರ ₹ 481ರಷ್ಟು ಏರಿಕೆ

ಪಿಟಿಐ
Published 3 ಡಿಸೆಂಬರ್ 2020, 18:10 IST
Last Updated 3 ಡಿಸೆಂಬರ್ 2020, 18:10 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸತತ ಎರಡನೇ ದಿನವೂ ಚಿನ್ನ, ಬೆಳ್ಳಿ ದರ ಏರಿಕೆ ಕಂಡಿದೆ.

10 ಗ್ರಾಂ ಚಿನ್ನದ ದರ ₹ 481ರಷ್ಟು ಹೆಚ್ಚಾಗಿದ್ದು, ₹ 48,887ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 555ರಷ್ಟು ಹೆಚ್ಚಾಗಿ ₹ 63,502ರಂತೆ ಮಾರಾಟವಾಗಿದೆ.

ಅಮೆರಿಕ ಮತ್ತು ಯುರೋಪ್‌ ಒಕ್ಕೂಟದಿಂದ ಆರ್ಥಿಕ ಉತ್ತೇಜನ ಕೊಡುಗೆ ಘೋಷಣೆಯಾಗುವ ನಿರೀಕ್ಷೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆಯಾಗಿದೆ. ಹೀಗಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಏರಿಕೆ ಕಂಡಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ್ ತಪನ್‌ ಪಟೇಲ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.