
ಪಿಟಿಐ
ಚಿನ್ನ
(ಪ್ರಾತಿನಿಧಿಕ ಚಿತ್ರ)
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆ ಕಂಡಿದೆ.
10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹1,950 ಹೆಚ್ಚಳವಾಗಿ, ₹1,58,650ರಂತೆ ಮಾರಾಟವಾಗಿದೆ. ಬೆಳ್ಳಿ ದರವು ಕೆ.ಜಿಗೆ ₹18 ಸಾವಿರ ಏರಿಕೆಯಾಗಿ, ₹2.64 ಲಕ್ಷಕ್ಕೆ ತಲುಪಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಅಮೆರಿಕ ಮತ್ತು ಇರಾನ್ ನಡುವೆ ಉಂಟಾಗಿರುವ ಬಿಕ್ಕಟ್ಟಿನಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಗಳಲ್ಲಿ ಹಣ ತೊಡಗಿಸಲು ಮುಂದಾಗಿದ್ದಾರೆ. ಇದರಿಂದಾಗಿ ಚಿನ್ನ ಮತ್ತು ಬೆಳ್ಳಿ ದರ ಏರಿಕೆಯಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಸರಕುಗಳ ವಿಭಾಗದ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.