ADVERTISEMENT

ಚಿನ್ನದ ದರ 10ಗ್ರಾಂಗೆ ₹ 396 ಇಳಿಕೆ

ಪಿಟಿಐ
Published 5 ಫೆಬ್ರುವರಿ 2020, 16:51 IST
Last Updated 5 ಫೆಬ್ರುವರಿ 2020, 16:51 IST
   

ನವದೆಹಲಿ: ಸತತ ಎರಡನೇ ದಿನವೂ ಚಿನ್ನದ ಬೆಲೆ ಇಳಿಕೆಯಾಗಿದೆ. ದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ ₹ 396ರಂತೆ ಇಳಿಕೆ ಕಂಡು
₹ 40,871ರಂತೆ ಮಾರಾಟವಾಗಿದೆ.

10 ಗ್ರಾಂ.ದರ ಮುಂಬೈನಲ್ಲಿ ₹ 394ರಂತೆ ಇಳಿಕೆಯಾಗಿ ₹ 40,049ರಂತೆ ಹಾಗೂ ಬೆಂಗಳೂರಿನಲ್ಲಿ ₹ 281ರಂತೆ ಕಡಿಮೆಯಾಗಿ
₹ 40,320ರಂತೆ ಮಾರಾಟವಾಯಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಮುಖವಾಗಿದೆ. ಹೀಗಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಬೆಲೆ ಇಳಿಕೆಯಾಗುತ್ತಿದೆ ಎಂದು ತಜ್ಞರು ಹೇಳಿದ್ದಾರೆ.

ADVERTISEMENT

ಆರ್‌ಬಿಐನಿಂದ ಬಡ್ಡಿದರ ಕಡಿತ ನಿರೀಕ್ಷೆ: ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು (ಎಂಪಿಸಿ) ಗುರುವಾರ ಬಡ್ಡಿದರಲ್ಲಿ ಇಳಿಕೆ ಮಾಡುವ ನಿರೀಕ್ಷೆ ಇದೆ ಎಂದು ಎಚ್‌ಡಿಎಫ್‌ಸಿ ಬ್ಯಾಂಕ್‌ ಹೇಳಿದೆ.

ಗ್ರಾಹಕರ ಖರೀದಿ ಸಾಮರ್ಥ್ಯ ಹೆಚ್ಚಿಸುವ ದೃಷ್ಟಿಯಿಂದ ಯಾವುದೇ ನಿರ್ಧಾರಗಳು ಬಜೆಟ್‌ನಲ್ಲಿ ಹೊರಬಿದ್ದಿಲ್ಲ. ಹೀಗಾಗಿ ಬಡ್ಡಿದರಗಳಲ್ಲಿ ಇಳಿಕೆ ಮಾಡುವ ಮೂಲಕ ಆರ್‌ಬಿಐ, ಆರ್ಥಿಕ ಚೇತರಿಕೆಗೆ ಮುಂದಾಗಬೇಕಿದೆ ಎಂದು ಹೇಳಿದೆ.

ಚಿಲ್ಲರೆ ಹಣದುಬ್ಬರವು ಆರ್‌ಬಿಐನ ನಿರೀಕ್ಷೆಯನ್ನೂ ಮೀರಿ (ಶೇ 6) ಬೆಳೆದಿರುವುದರಿಂದ ಈ ಬಾರಿಯೂ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ ಇದೆ ಎಂದೂ ತಿಳಿಸಿದೆ. ಡಿಸೆಂಬರ್‌ನಲ್ಲಿ ಚಿಲ್ಲರೆ ಹಣದುಬ್ಬರ 5 ವರ್ಷಗಳ ಗರಿಷ್ಠ ಮಟ್ಟವಾದ ಶೇ 7.3ಕ್ಕೆ ಏರಿಕೆ ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.