ಚಿನ್ನ, ಬೆಳ್ಳಿ
ನವದೆಹಲಿ/ಬೆಂಗಳೂರು: ಬೆಂಗಳೂರಿನ ರಿಟೇಲ್ ಮಾರುಕಟ್ಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಕೆ.ಜಿ ಬೆಳ್ಳಿ ಧಾರಣೆ ₹2.06 ಲಕ್ಷ ಆಗಿದೆ.
‘ಬೆಂಗಳೂರಿನಲ್ಲಿ 3,500ಕ್ಕೂ ಹೆಚ್ಚು ಚಿನ್ನಾಭರಣ ಅಂಗಡಿಗಳು ಇವೆ. ರಿಟೇಲ್ ಮಾರುಕಟ್ಟೆಯಲ್ಲಿ ಬೆಳ್ಳಿ ಕೆ.ಜಿಗೆ ₹2.07 ಲಕ್ಷದವರೆಗೂ ಮಾರಾಟವಾಗಿದೆ’ ಎಂದು ಬೆಂಗಳೂರು ಜ್ಯುವೆಲರ್ಸ್ ಅಸೋಸಿಯೇಷನ್‌ನ ಕಾರ್ಯದರ್ಶಿ ಆರ್. ಶ್ರೀನಿವಾಸ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
ನವದೆಹಲಿಯ ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹1 ಸಾವಿರದಷ್ಟು ಹೆಚ್ಚಳವಾಗಿ, ₹1,31,800 ಆಗಿದೆ. ಆಭರಣ ಚಿನ್ನದ (ಶೇ 99.5ರಷ್ಟು ಪರಿಶುದ್ಧತೆ) ಬೆಲೆ ಇಷ್ಟೇ ಪ್ರಮಾಣದಲ್ಲಿ ಏರಿಕೆಯಾಗಿ, ₹1,31,200ರಂತೆ ಮಾರಾಟವಾಗಿದೆ. ಆದರೆ, ಬೆಳ್ಳಿ ಧಾರಣೆ ಕೆ.ಜಿಗೆ ₹3 ಸಾವಿರ ಇಳಿಕೆಯಾಗಿ, ₹1.82 ಲಕ್ಷವಾಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ದೀಪಾವಳಿ ಕಾರಣದಿಂದಾಗಿ ಸಣ್ಣ ಹೂಡಿಕೆದಾರರಿಂದ ಮತ್ತು ಆಭರಣ ತಯಾರಕರಿಂದ ಚಿನ್ನದ ಖರೀದಿ ಹೆಚ್ಚಳವಾಗಿದೆ. ಹೀಗಾಗಿ ದರ ಏರಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.