ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನ, ಬೆಳ್ಳಿ ದರ ಹೆಚ್ಚಾಗಿದೆ. 10 ಗ್ರಾಂ ಚಿನ್ನದ ದರ ₹ 304ರಷ್ಟು ಏರಿಕೆ ಕಂಡು ₹ 52,302ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 508ರಷ್ಟು ಹೆಚ್ಚಾಗಿ ₹ 67,407ಕ್ಕೆ ಏರಿಕೆ ಆಯಿತು.
ಜಾಗತಿಕ ಬಿಕ್ಕಟ್ಟಿನಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಕಂಡಿದೆ. ಇದರಿಂದಾಗಿ ದೇಶಿ ಮಾರುಕಟ್ಟೆಯಲ್ಲಿಯೂ ದರ ಹೆಚ್ಚಾಯಿತು ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.