ADVERTISEMENT

ಚಿನ್ನದ ಬೆಲೆ; ಮತ್ತೆ ಗಮನಾರ್ಹ ಏರಿಕೆ

ಪಿಟಿಐ
Published 12 ಆಗಸ್ಟ್ 2021, 12:46 IST
Last Updated 12 ಆಗಸ್ಟ್ 2021, 12:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನದ ದರ 10 ಗ್ರಾಂಗೆ ₹ 422 ರಷ್ಟು ಹೆಚ್ಚಾಗಿ ₹ 45,560ರಂತೆ ಮಾರಾಟವಾಯಿತು.

ಬೆಳ್ಳಿ ಧಾರಣೆ ಕೆ.ಜಿಗೆ ₹ 113ರಷ್ಟು ಹೆಚ್ಚಾಗಿದ್ದು ₹ 61,314ಕ್ಕೆ ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ದರದಲ್ಲಿ ಏರಿಕೆ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ADVERTISEMENT

ಅಮೆರಿಕದ ಡಾಲರ್‌ ಮೌಲ್ಯ ಇಳಿಕೆ ಹಾಗೂ ಬಾಂಡ್‌ ಗಳಿಕೆ ತಗ್ಗಿದ್ದರಿಂದ ಚಿನ್ನದ ದರ ಚೇತರಿಸಿಕೊಂಡಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟಿಸ್‌ನ ಹಿರಿಯ ವಿಶ್ಲೇಷಕ ತಪನ್‌ ಪಟೇಲ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.