ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು 10 ಗ್ರಾಂಗೆ ₹ 527ರಷ್ಟು ಹೆಚ್ಚಾಗಿ, ₹ 48,589ಕ್ಕೆ ತಲುಪಿದೆ. ಬೆಳ್ಳಿಯ ಬೆಲೆಯಲ್ಲಿಯೂ ಹೆಚ್ಚಳವಾಗಿದೆ. ಕೆ.ಜಿ. ಬೆಳ್ಳಿ ದರವು ₹ 1,043ರಷ್ಟು ಜಾಸ್ತಿಯಾಗಿ ₹ 71,775ರಂತೆ ಮಾರಾಟವಾಗಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೆಚ್ಚಳವಾದ ಪರಿಣಾಮವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಬೆಲೆ ಏರಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.