ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ 10 ಗ್ರಾಂಗೆ ₹ 542ರಷ್ಟು ಹೆಚ್ಚಾಗಿ ₹ 53,461ಕ್ಕೆ ತಲುಪಿತು. ಬೆಳ್ಳಿ ಧಾರಣೆ ಕೆ.ಜಿಗೆ ₹ 993ರಷ್ಟು ಏರಿಕೆ ಕಂಡು ₹ 69,932ರಂತೆ ಮಾರಾಟವಾಯಿತು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಹಾಗೂ ರೂಪಾಯಿ ಮೌಲ್ಯ ಇಳಿಕೆ ಆಗಿರುವುದರಿಂದ ದೇಶದಲ್ಲಿ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.