ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಚಿನ್ನದ ದರ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ.
10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹2,100 ಹೆಚ್ಚಳವಾಗಿ, ₹1,03,670ರಂತೆ ಮಾರಾಟವಾಗಿದೆ. ಆಭರಣ ಚಿನ್ನವು (ಶೇ 99.5 ಪರಿಶುದ್ಧತೆ) ಬೆಲೆಯು ಇಷ್ಟೇ ಪ್ರಮಾಣದಲ್ಲಿ ಏರಿಕೆಯಾಗಿ, ₹1,03,100 ಆಗಿದೆ.
ಬೆಳ್ಳಿ ಧಾರಣೆ ಕೆ.ಜಿಗೆ ₹1 ಸಾವಿರ ಇಳಿಕೆಯಾಗಿ, ₹1.19 ಲಕ್ಷವಾಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಡಾಲರ್ ಎದುರು ರೂಪಾಯಿ ಮೌಲ್ಯವು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿತವಾಗಿರುವುದು ಮತ್ತು ಅಮೆರಿಕದ ಸುಂಕ ಹೆಚ್ಚಳವು ಹಳದಿ ಲೋಹದ ದರ ಏರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ. ದಾಸ್ತಾನುಗಾರರಿಂದ ನಿರಂತರ ಖರೀದಿ ಸಹ ಚಿನ್ನದ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.