ADVERTISEMENT

Gold Price | 10 ಗ್ರಾಂ ಚಿನ್ನದ ದರ ₹850 ಹೆಚ್ಚಳ: ಬೆಳ್ಳಿ ದರ ಯಥಾಸ್ಥಿತಿ

ಪಿಟಿಐ
Published 20 ಫೆಬ್ರುವರಿ 2026, 14:15 IST
Last Updated 20 ಫೆಬ್ರುವರಿ 2026, 14:15 IST
<div class="paragraphs"><p>ಮಹಿಳೆಯರು ಚಿನ್ನಾಭರಣ ಖರೀದಿಯಲ್ಲಿ ತೊಡಗಿರುವ ಸಂದರ್ಭ</p></div>

ಮಹಿಳೆಯರು ಚಿನ್ನಾಭರಣ ಖರೀದಿಯಲ್ಲಿ ತೊಡಗಿರುವ ಸಂದರ್ಭ

   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಚಿನ್ನ ಧಾರಣೆ ಏರಿಕೆ ಕಂಡಿದ್ದು, ಬೆಳ್ಳಿ ಧಾರಣೆ ಯಥಾಸ್ಥಿತಿಯಲ್ಲಿದೆ.

10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹1,850 ಹೆಚ್ಚಳವಾಗಿ, ₹1,59,500ರಂತೆ ಮಾರಾಟವಾಗಿದೆ. ಬೆಳ್ಳಿ ದರಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ (ಕೆ.ಜಿಗೆ ₹2.64 ಲಕ್ಷದಷ್ಟಿದೆ) ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

ADVERTISEMENT

ಅಮೆರಿಕ ಮತ್ತು ಇರಾನ್‌ ನಡುವೆ ಉಂಟಾಗಿರುವ ಬಿಕ್ಕಟ್ಟಿನಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಗಳಲ್ಲಿ ಹಣ ತೊಡಗಿಸಲು ಮುಂದಾಗಿದ್ದಾರೆ. ಇದರಿಂದಾಗಿ ಚಿನ್ನ ಮತ್ತು ಬೆಳ್ಳಿ ದರ ಏರಿಕೆಯಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಸರಕುಗಳ ವಿಭಾಗದ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.