ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಬುಧವಾರ ಚಿನ್ನದ ದರ ಏರಿಕೆಯಾಗಿದೆ. ಹೀಗಾಗಿ, ದೇಶೀಯ ಚಿನಿವಾರ ಪೇಟೆಯಲ್ಲೂ ಧಾರಣೆಯು ಹೆಚ್ಚಳವಾಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
10 ಗ್ರಾಂ ಚಿನ್ನದ (ಶೇ 99.9 ಪರಿಶುದ್ಧತೆ) ದರವು ₹1,910 ಏರಿಕೆಯಾಗಿದ್ದು, ₹98,450ರಂತೆ ಮಾರಾಟವಾಗಿದೆ. ಆಭರಣ ಚಿನ್ನದ (ಶೇ 99.5 ಪರಿಶುದ್ಧತೆ) ಬೆಲೆಯು ₹1,870 ಹೆಚ್ಚಳವಾಗಿ, ₹98 ಸಾವಿರ ಆಗಿದೆ.
ಬೆಳ್ಳಿ ದರವು ಕೆ.ಜಿಗೆ ₹1,660 ಏರಿಕೆಯಾಗಿ, ₹99,160 ಆಗಿದೆ.
‘ಡಾಲರ್ ಮೌಲ್ಯ ಇಳಿಕೆಯಾಗುತ್ತಿದೆ. ಆರ್ಥಿಕ ಅನಿಶ್ಚಿತತೆಯಿಂದಾಗಿ ಮೂಡೀಸ್ ಸಂಸ್ಥೆಯು ಅಮೆರಿಕದ ಕ್ರೆಡಿಟ್ ರೇಟಿಂಗ್ ಅನ್ನು ‘ಎಎಎ’ ದಿಂದ ‘ಎಎ1’ ಶ್ರೇಣಿಗೆ ಇಳಿಸಿದೆ. ಇದು ಹೂಡಿಕೆದಾರರಲ್ಲಿ ಆತಂಕ ಹೆಚ್ಚಿಸಿದ್ದು, ಹಳದಿ ಲೋಹದ ಖರೀದಿಗೆ ಮುಂದಾಗಿದ್ದಾರೆ. ಇದರಿಂದ ಬೆಲೆ ಏರಿಕೆಯಾಗಿದೆ’ ಎಂದು ಅಬಾನ್ಸ್ ಫೈನಾನ್ಶಿಯಲ್ ಸರ್ವಿಸಸ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚಿಂತನ್ ಮೆಹ್ತಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.