ಚಿನ್ನ, ಬೆಳ್ಳಿ ದರ
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಇಳಿಕೆ ಆಗಿದೆ.
10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹1,200 ಇಳಿಕೆಯಾಗಿ, ₹88,200 ಆಗಿದೆ. ಆಭರಣ ಚಿನ್ನವು (ಶೇ 99.5 ಪರಿಶುದ್ಧತೆ) ಇಷ್ಟೇ ಪ್ರಮಾಣದಲ್ಲಿ ಕಡಿಮೆಯಾಗಿ, ₹87,800 ಆಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಬೆಳ್ಳಿ ಧಾರಣೆಯು ಕೆ.ಜಿಗೆ ₹1,800 ಇಳಿಕೆಯಾಗಿ, ₹98,200ರಂತೆ ಮಾರಾಟವಾಗಿದೆ.
ದೇಶೀಯ ಮಾರುಕಟ್ಟೆಯಲ್ಲಿ ಆಭರಣ ತಯಾರಕರು ಮತ್ತು ಚಿಲ್ಲರೆ ಮಾರಾಟಗಾರರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆಯಾಗಿದೆ. ಇದರಿಂದ ಹಳದಿ ಲೋಹದ ಧಾರಣೆಯಲ್ಲಿ ಇಳಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.