ADVERTISEMENT

ಚಿನ್ನ, ಬೆಳ್ಳಿ ದರ ಹೆಚ್ಚಳ; ಚಿನ್ನದ ದರ 10 ಗ್ರಾಂಗೆ ₹ 340 ಏರಿಕೆ

ಪಿಟಿಐ
Published 17 ಆಗಸ್ಟ್ 2020, 15:45 IST
Last Updated 17 ಆಗಸ್ಟ್ 2020, 15:45 IST
ಚಿನ್ನ
ಚಿನ್ನ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ದರ10 ಗ್ರಾಂಗೆ ₹ 340ರಷ್ಟು ಹೆಚ್ಚಾಗಿ ₹ 53,611ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ₹ 1,306ರಷ್ಟು ಹೆಚ್ಚಾಗಿ ಕೆ.ಜಿಗೆ ₹ 69,820ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ ಆಗಿರುವುದೇ ದೇಶದಲ್ಲಿಯೂ ದರ ಏರಿಕೆಗೆ ಕಾರಣವಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

‘ಜಾಗತಿಕ ಆರ್ಥಿಕ ಬೆಳವಣಿಗೆ ಬಗ್ಗೆ ಆತಂಕ ವ್ಯಕ್ತವಾಗಿದೆ. ಇದರಿಂದಾಗಿ ಸೋಮವಾರ ಚಿನ್ನದ ದರ ಹೆಚ್ಚಾಯಿತು’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್‌ ಪಟೇಲ್‌ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.