ಚಿನ್ನ
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ದರ ಏರಿಕೆ ಆಗಿದೆ. ಚಿನ್ನದ ದರ 10 ಗ್ರಾಂ. ಗೆ ₹250 ಏರಿಕೆಯಾಗಿ, ₹66,200ರಂತೆ ಮಾರಾಟವಾಯಿತು.
ಬೆಳ್ಳಿ ಧಾರಣೆ ಕೆ.ಜಿಗೆ ₹1,700 ಹೆಚ್ಚಳವಾಗಿ, ₹77,000 ಮುಟ್ಟಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿದ್ದು, ದೇಶೀಯ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಹೇಳಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,169 ಡಾಲರ್ ಮತ್ತು 24.92 ಡಾಲರ್‌ನಂತೆ ಮಾರಾಟವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.