ADVERTISEMENT

ಚಿನ್ನದ ದರ ₹ 514ರಷ್ಟು ಏರಿಕೆ

ಪಿಟಿಐ
Published 15 ಡಿಸೆಂಬರ್ 2020, 17:28 IST
Last Updated 15 ಡಿಸೆಂಬರ್ 2020, 17:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನ, ಬೆಳ್ಳಿ ದರ ಹೆಚ್ಚಾಗಿದೆ. 10 ಗ್ರಾಂ ಚಿನ್ನದ ದರ ₹ 514ರಷ್ಟು ಏರಿಕೆಯಾಗಿ ₹ 48,847ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,046ರಷ್ಟು ಹೆಚ್ಚಾಗಿ ₹ 63,612ಕ್ಕೆ ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಹಾಗೂ ರೂಪಾಯಿ ಮೌಲ್ಯ ಇಳಿಕೆಯಿಂದಾಗಿ ದೇಶದಲ್ಲಿ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT