ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನ, ಬೆಳ್ಳಿ ದರ ಬುಧವಾರವೂ ಇಳಿಕೆ ಆಗಿದೆ. 10 ಗ್ರಾಂ ಚಿನ್ನದ ದರ ₹ 229ರಷ್ಟು ಇಳಿಕೆ ಆಗಿ ₹ 47,074ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 717ರಷ್ಟು ಕಡಿಮೆಯಾಗಿ ₹ 70,807ಕ್ಕೆ ತಲುಪಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಕಡಿಮೆ ಆಗಿದೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.