ADVERTISEMENT

Gold, Silver Rate | ಚಿನ್ನದ ದರ ₹1,300, ಬೆಳ್ಳಿ ₹1,670 ಇಳಿಕೆ

ಪಿಟಿಐ
Published 17 ಸೆಪ್ಟೆಂಬರ್ 2025, 14:18 IST
Last Updated 17 ಸೆಪ್ಟೆಂಬರ್ 2025, 14:18 IST
   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಇಳಿಕೆ ಕಂಡಿವೆ.

10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹1,300 ಕಡಿಮೆಯಾಗಿ, ₹1,13,800ರಂತೆ ಮಾರಾಟವಾಗಿದೆ. ಆಭರಣ ಚಿನ್ನದ ಬೆಲೆ (ಶೇ 99.5 ಪರಿಶುದ್ಧತೆ) ಇಷ್ಟೇ ಪ್ರಮಾಣದಲ್ಲಿ ಇಳಿಕೆಯಾಗಿ, ₹1,13,300 ಆಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹1,670 ಕಡಿಮೆಯಾಗಿ, ₹1,31,200 ಆಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

ಅಮೆರಿಕದ ಫೆಡರಲ್‌ ಮುಕ್ತ ಮಾರುಕಟ್ಟೆ ಸಮಿತಿಯ ಹಣಕಾಸು ನೀತಿಗೆ ಸಂಬಂಧಿಸಿದ ನಿರ್ಧಾರವು ಪ್ರಕಟಗೊಳ್ಳಲಿದೆ. ಇದರಿಂದ ಹೂಡಿಕೆದಾರರು ಎಚ್ಚರಿಕೆ ನಡೆ ಅನುಸರಿಸಿದರು. ಲಾಭ ಗಳಿಸಲು ಹೂಡಿಕೆದಾರರು ಚಿನ್ನ ಮತ್ತು ಬೆಳ್ಳಿ ಮಾರಾಟಕ್ಕೆ ಮುಂದಾಗಿದ್ದರಿಂದ ಲೋಹದ ದರವು ಇಳಿಕೆ ಕಂಡಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.