
ಪ್ರಜಾವಾಣಿ ವಾರ್ತೆ
ಚಿನ್ನ, ಬೆಳ್ಳಿ
(ಸಾಂದರ್ಭಿಕ ಚಿತ್ರ)
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆ ಆಗಿದೆ.
10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹600ರಷ್ಟು ಹೆಚ್ಚಳವಾಗಿ, ₹1,24,700ರಂತೆ ಮಾರಾಟವಾಗಿದೆ. ಆಭರಣ ಚಿನ್ನದ (ಶೇ 99.5ರಷ್ಟು ಪರಿಶುದ್ಧತೆ) ಬೆಲೆ ಇಷ್ಟೇ ಪ್ರಮಾಣದಲ್ಲಿ ಏರಿಕೆಯಾಗಿ, ₹1,24,100 ಆಗಿದೆ.
ಬೆಳ್ಳಿ ಧಾರಣೆ ಕೆ.ಜಿಗೆ ₹1,800 ಹೆಚ್ಚಳವಾಗಿ, ₹1,53,300ಕ್ಕೆ ತಲುಪಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ. ವರ್ತಕರಿಂದ ಚಿನ್ನದ ಖರೀದಿ ಹೆಚ್ಚಳವಾಗಿದೆ. ಇದು ಬೆಲೆ ಏರಿಕೆಗೆ ಕಾರಣ ಎಂದು ತಿಳಿಸಿದೆ.
ಡಾಲರ್ ಮೌಲ್ಯ ಇಳಿಕೆಯಾಗಿದೆ. ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾದ ಚಿನ್ನದ ಖರೀದಿಗೆ ಮುಂದಾಗಿದ್ದುದು ಸಹ ದರ ಏರಿಕೆಗೆ ಕಾರಣ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.