
ಪಿಟಿಐ
ಪ್ರಾತಿನಿಧಿಕ ಚಿತ್ರ
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆ ಕಂಡಿದೆ.
10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹7,400 ಹೆಚ್ಚಳವಾಗಿ ₹1,65,100ರಂತೆ ಮಾರಾಟವಾಗಿದೆ. ಬೆಳ್ಳಿ ದರವು ಕೆ.ಜಿಗೆ ₹14,300 ಏರಿಕೆಯಾಗಿ, ₹2,98,300ಕ್ಕೆ ತಲುಪಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಡಾಲರ್ ಮೌಲ್ಯ ಇಳಿಕೆ ಮತ್ತು ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾದ ಚಿನ್ನ ಮತ್ತು ಬೆಳ್ಳಿ ಖರೀದಿಗೆ ಮುಂದಾದರು. ಇದು ದರ ಏರಿಕೆಗೆ ಕಾರಣ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.