ADVERTISEMENT

Gold And Silver Price | ಚಿನ್ನ ದರ ₹2,200, ಬೆಳ್ಳಿ ₹4,380 ಏರಿಕೆ

ಪಿಟಿಐ
Published 22 ಸೆಪ್ಟೆಂಬರ್ 2025, 14:18 IST
Last Updated 22 ಸೆಪ್ಟೆಂಬರ್ 2025, 14:18 IST
<div class="paragraphs"><p>ಚಿನ್ನ, ಬೆಳ್ಳಿ </p></div>

ಚಿನ್ನ, ಬೆಳ್ಳಿ

   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ.

10 ಗ್ರಾಂ ಚಿನ್ನದ (ಶೇ 99.9 ಪರಿಶುದ್ಧತೆ) ದರವು ₹2,200 ಹೆಚ್ಚಳವಾಗಿ, ₹1,16,200ರಂತೆ ಮಾರಾಟವಾಗಿದೆ. ಆಭರಣ ಚಿನ್ನದ (ಶೇ 99.5 ಪರಿಶುದ್ಧತೆ) ಬೆಲೆಯು ₹2,150 ಏರಿಕೆಯಾಗಿ, ₹1,15,650 ಆಗಿದೆ. ಬೆಳ್ಳಿ ದರವು ಕೆ.ಜಿಗೆ ₹4,380 ಹೆಚ್ಚಳವಾಗಿ, ₹1,36,380ಕ್ಕೆ ತಲುಪಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

ADVERTISEMENT

‘ಪ್ರಸಕ್ತ ವರ್ಷದ ಅಂತ್ಯದ ವೇಳೆಗೆ ಅಮೆರಿಕದ ಫೆಡರಲ್‌ ರಿಸರ್ವ್‌ ಎರಡು ಬಾರಿ ಬಡ್ಡಿ ದರ ಕಡಿತ ಮಾಡುವ ನಿರೀಕ್ಷೆ ಇದೆ. ಅಲ್ಲದೆ, ಕೇಂದ್ರೀಯ ಬ್ಯಾಂಕ್‌ಗಳಿಂದ ಚಿನ್ನದ ಖರೀದಿ ಪ್ರಮಾಣವು ಹೆಚ್ಚಳವಾಗಿದೆ. ಇದು ಹಳದಿ ಲೋಹದ ದರ ಏರಿಕೆಗೆ ಕಾರಣವಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಹೇಳಿದ್ದಾರೆ.

‘ವಿದ್ಯುತ್‌ಚಾಲಿತ ವಾಹನಗಳು, ಎಲೆಕ್ಟ್ರಾನಿಕ್ಸ್‌ ವಲಯ, ಸೌರ ಪರಿಕರಗಳಿಗೆ ಬೆಳ್ಳಿ ಬಳಸಲಾಗುತ್ತಿದ್ದು, ಹೆಚ್ಚಿನ ಬೇಡಿಕೆ ಇದೆ. ಆದರೆ, ಬೆಳ್ಳಿ ಪೂರೈಕೆಯಲ್ಲಿ ಇಳಿಕೆ ಆಗಿದೆ. ಇದು ಬೆಳ್ಳಿ ದರ ಏರಿಕೆಗೆ ಕಾರಣವಾಗಿದೆ’ ಎಂದು ರಿಲಯನ್ಸ್ ಸೆಕ್ಯುರಿಟೀಸ್‌ನ ಹಿರಿಯ ಸಂಶೋಧನಾ ವಿಶ್ಲೇಷಕ ಜಿಗರ್ ತ್ರಿವೇದಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.