
ಪಿಟಿಐ
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯ ಏರಿಕೆ ಮುಂದುವರಿದಿದೆ.
10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹6,500ರಷ್ಟು ಹೆಚ್ಚಳವಾಗಿ, ₹1,59,700ಕ್ಕೆ ತಲುಪಿದೆ. ಬೆಳ್ಳಿ ದರವು ಕೆ.ಜಿಗೆ ₹11,300 ಏರಿಕೆಯಾಗಿ, ₹3,34,300ಕ್ಕೆ ತಲುಪಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಬೆಳ್ಳಿ ಪೂರೈಕೆಯಲ್ಲಿ ಕೊರತೆ ಉಂಟಾಗಿರುವುದು ಮತ್ತು ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ರಾಜಕೀಯ ಅನಿಶ್ಚಿತತೆಯಿಂದ ಹೂಡಿಕೆದಾರರು ನಿರಂತರವಾಗಿ ಚಿನ್ನ ಮತ್ತು ಬೆಳ್ಳಿಯಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ. ಇದು ಬೆಲೆ ಏರಿಕೆಗೆ ಕಾರಣ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.