ಚಿನ್ನ
ನವದೆಹಲಿ (ಪಿಟಿಐ): ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಹೂಡಿಕೆದಾರರು ಲಾಭ ಗಳಿಕೆಯ ಉದ್ದೇಶದಿಂದ ಮಾರಾಟಕ್ಕೆ ಹೆಚ್ಚು ಗಮನ ನೀಡಿದ್ದರಿಂದಾಗಿ ದಾಖಲೆಯ ಮಟ್ಟಕ್ಕೆ ಜಿಗಿದಿದ್ದ ಚಿನ್ನ ಮತ್ತು ಬೆಳ್ಳಿ ಧಾರಣೆಯು ಇಳಿಕೆಯಾಗಿದೆ.
ಚಿನ್ನದ ದರವು 10 ಗ್ರಾಂಗೆ ₹550 ಕಡಿಮೆಯಾಗಿ, ₹74,650ಕ್ಕೆ ಮಾರಾಟವಾಯಿತು. ಬೆಳ್ಳಿ ಧಾರಣೆಯು ಕೆ.ಜಿಗೆ ₹1,600 ಇಳಿಕೆಯಾಗಿದ್ದು, ₹94,500 ಆಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,420 ಡಾಲರ್ (ಅಂದಾಜು ₹2.01 ಲಕ್ಷ) ಮತ್ತು 31.60 (ಅಂದಾಜು ₹2,632) ಡಾಲರ್‌ನಂತೆ ಮಾರಾಟವಾಗಿದೆ.
‘ಚಿಲ್ಲರೆ ಹಣದುಬ್ಬರವನ್ನು ನಿಗದಿತ ಗುರಿಯಲ್ಲಿ ಕಾಯ್ದುಕೊಳ್ಳಲು ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವುದು ಅನಿವಾರ್ಯವೆಂದು ಅಮೆರಿಕದ ಫೆಡರಲ್ ರಿಸರ್ವ್‌ನ ಹಣಕಾಸು ನೀತಿ ಸಮಿತಿ ಸಭೆಯ ಸದಸ್ಯರೊಬ್ಬರು ಇಂಗಿತ ವ್ಯಕ್ತಪಡಿಸಿದ್ದಾರೆ. ಇದು ಮಾರುಕಟ್ಟೆಯಲ್ಲಿ ಹಳದಿ ಲೋಹದ ದರ ಇಳಿಕೆಗೆ ಕಾರಣವಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.