ಚಿನ್ನ, ಬೆಳ್ಳಿ ದರ
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯಲ್ಲಿ ಇಳಿಕೆಯಾಗಿದೆ.
10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹110 ಕಡಿಮೆಯಾಗಿ, ₹97,670ರಂತೆ ಮಾರಾಟವಾಗಿದೆ. ಆಭರಣ ಚಿನ್ನದ ಬೆಲೆಯು (ಶೇ 99.5 ಪರಿಶುದ್ಧತೆ) ₹100 ಇಳಿಕೆಯಾಗಿ, ₹97,250 ಆಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹1 ಸಾವಿರ ಕಡಿಮೆಯಾಗಿದ್ದು, ₹1,07,100 ಆಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.