ನವದೆಹಲಿ (ಪಿಟಿಐ): ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನದ ದರ 10ಗ್ರಾಂಗೆ ₹ 248ರಷ್ಟು ಕಡಿಮೆಯಾಗಿ ₹ 49,714ರಂತೆ ಮಾರಾಟವಾಗಿದೆ.
ಬೆಳ್ಳಿ ಧಾರಣೆ ಕೆ.ಜಿಗೆ ₹ 853ರಷ್ಟು ಇಳಿಕೆಯಾಗಿ ₹ 61,184ರಂತೆ ಮಾರಾಟವಾಗಿದೆ.
ಹೂಡಿಕೆದಾರರು ಮತ್ತು ವರ್ತಕರು ಷೇರುಪೇಟೆಗಳಲ್ಲಿ ವಹಿವಾಟು ನಡೆಸಲು ಗಮನ ನೀಡಿದ್ದರಿಂದಾಗಿ ಚಿನ್ನದ ದರ ಇಳಿಕೆಯಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್ ಪಟೇಲ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.