ಮೈಸೂರಿನ ಚಿನ್ನಾಭರಣ ಮಳಿಗೆಯೊಂದರಲ್ಲಿ ಯುವತಿಯರು ಚಿನ್ನ ಖರೀದಿಸಿದರು.
– ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ನಡೆದ ವಹಿವಾಟಿನಲ್ಲಿ ಚಿನ್ನದ ದರ ಏರಿಕೆಯಾಗಿದೆ.
10 ಗ್ರಾಂ ಚಿನ್ನದ (ಶೇ 99.9 ಪರಿಶುದ್ಧತೆ) ಬೆಲೆಯು ₹950 ಏರಿಕೆಯಾಗಿದ್ದು, ₹97,500 ಆಗಿದೆ. ಆಭರಣ ಚಿನ್ನದ (ಶೇ 99.5 ಪರಿಶುದ್ಧತೆ) ಬೆಲೆಯು ₹1 ಸಾವಿರ ಹೆಚ್ಚಳವಾಗಿದ್ದು, ₹97,100 ಆಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಬೆಳ್ಳಿ ಧಾರಣೆಯು ಪ್ರತಿ ಕೆ.ಜಿಗೆ ₹250 ಇಳಿಕೆಯಾಗಿದ್ದು, ₹99,450 ಆಗಿದೆ.
‘ಅಮೆರಿಕ ಮತ್ತು ಚೀನಾ ನಡುವಿನ ಸುಂಕ ಸಮರಕ್ಕೆ ತಾತ್ಕಾಲಿಕ ತಡೆ ಬಿದ್ದಿರುವ ಪರಿಣಾಮ ಹೂಡಿಕೆದಾರರು ಚಿನ್ನದ ಮೇಲಿನ ಹೂಡಿಕೆಗೆ ಮುಂದಾಗಿದ್ದಾರೆ. ಹಾಗಾಗಿ, ಹಳದಿ ಲೋಹದ ಬೆಲೆಯಲ್ಲಿ ಇಳಿಕೆಯಾಗಿದೆ’ ಎಂದು ಅಬಾನ್ಸ್ ಫೈನಾನ್ಶಿಯಲ್ ಸರ್ವಿಸಸ್‌ನ ಸಿಇಒ ಚಿಂತನ್ ಮೆಹ್ತಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.