ನವದೆಹಲಿ: ಚಿನಿವಾರ ಪೇಟೆಯಲ್ಲಿ ಮಂಗಳವಾರ 10 ಗ್ರಾಂ ಚಿನ್ನದ ದರ ₹ 548ರಂತೆ ಇಳಿಕೆಯಾಗಿ ₹ 38,857ರಂತೆ ಮಾರಾಟವಾಯಿತು.
ಶುಕ್ರವಾರದ ವಹಿವಾಟಿನಲ್ಲಿ ಚಿನ್ನದ ದರ 10ಗ್ರಾಂಗೆ₹ 39,405 ಇತ್ತು.
ಜಾಗತಿಕ ಮಾರುಕಟ್ಟೆಯಲ್ಲಿ ಮಂದಗತಿಯ ವಹಿವಾಟು ನಡೆದಿದ್ದರಿಂದ ಚಿನ್ನದ ದರದಲ್ಲಿ ಇಳಿಕೆಯಾಗಿದೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ತಿಳಿಸಿದೆ.
ಬೆಳ್ಳಿ ಧಾರಣೆ ಕೆ.ಜಿಗೆ₹ 1,190ರಂತೆ ಇಳಿಕೆಯಾಗಿ₹ 48,280 ರಿಂದ ₹ 47,090ಕ್ಕೆ ಇಳಿಕೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.