ADVERTISEMENT

ಚಿನ್ನದ ದರ ₹750, ಬೆಳ್ಳಿ ₹1,400 ಇಳಿಕೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2024, 15:51 IST
Last Updated 14 ಫೆಬ್ರುವರಿ 2024, 15:51 IST
<div class="paragraphs"><p> ಚಿನ್ನ</p></div>

ಚಿನ್ನ

   

ನವದೆಹಲಿ (ಪಿಟಿಐ): ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ ಮತ್ತು ಬೆಳ್ಳಿ ದರ ಇಳಿಕೆ ಆಗಿದೆ. ಚಿನ್ನದ ದರ 10 ಗ್ರಾಂ.ಗೆ ₹750 ಇಳಿಕೆಯಾಗಿ, ₹62,350ಕ್ಕೆ ಮಾರಾಟವಾಯಿತು.

ಬೆಳ್ಳಿ ಧಾರಣೆಯು ಕೆ.ಜಿಗೆ ₹1,400 ಕಡಿಮೆಯಾಗಿ, ₹74,000ಕ್ಕೆ ಮುಟ್ಟಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆಯಾಗಿದೆ. ಇದು ದೇಶೀಯ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್‌ ಗಾಂಧಿ ಹೇಳಿದ್ದಾರೆ. 

ADVERTISEMENT

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ ಅಂದಾಜು 1,995 ಡಾಲರ್‌ ಮತ್ತು 21.97 ಡಾಲರ್‌ನಂತೆ ಮಾರಾಟವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.