ADVERTISEMENT

ಬೆಳ್ಳಿ ಕೆ.ಜಿಗೆ ₹4,500 ಕುಸಿತ

​ಪ್ರಜಾವಾಣಿ ವಾರ್ತೆ
Published 29 ಜುಲೈ 2024, 15:33 IST
Last Updated 29 ಜುಲೈ 2024, 15:33 IST
   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಬೆಳ್ಳಿ ಧಾರಣೆಯಲ್ಲಿ ಭಾರಿ ಇಳಿಕೆಯಾಗಿದೆ.

ಬೆಳ್ಳಿ ದರವು ಕೆ.ಜಿ ಗೆ ₹4,500 ಇಳಿಕೆಯಾಗಿ, ₹84,500ರಂತೆ ಮಾರಾಟವಾಗಿದೆ. 10 ಗ್ರಾಂ ಚಿನ್ನದ ಧಾರಣೆ ₹71,050ಕ್ಕೆ ಇಳಿದಿದೆ.

ಬಜೆಟ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ಮೇಲಿನ ಕಸ್ಟಮ್ಸ್‌ ಸುಂಕ ಕಡಿತಗೊಳಿಸಿದ್ದರಿಂದ ಬೆಲೆಯು ಇಳಿಕೆಯ ಹಾದಿಯಲ್ಲಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ADVERTISEMENT

ಜಾಗತಿಕ ಮಾರುಕಟ್ಟೆಯಲ್ಲಿ  ಚಿನ್ನ ಮತ್ತು ಬೆಳ್ಳಿ ಧಾರಣೆಯು ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,438 ಡಾಲರ್‌ (ಅಂದಾಜು ₹2.04 ಲಕ್ಷ) ಮತ್ತು 28.28 ಡಾಲರ್‌ನಂತೆ (ಅಂದಾಜು ₹2,367) ಮಾರಾಟವಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.