ADVERTISEMENT

ಚಿನ್ನದ ದರ ₹ 992, ಬೆಳ್ಳಿ ₹ 1,949ರಷ್ಟು ಇಳಿಕೆ

ಪಿಟಿಐ
Published 10 ಮಾರ್ಚ್ 2022, 13:32 IST
Last Updated 10 ಮಾರ್ಚ್ 2022, 13:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನ, ಬೆಳ್ಳಿ ದರ ಗುರುವಾರ ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ ₹ 992ರಷ್ಟು ಇಳಿಕೆ ಕಂಡು ₹ 52,635ಕ್ಕೆ ತಲುಪಿತು. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,949ರಷ್ಟು ಕಡಿಮೆ ಆಗಿದ್ದು, ₹ 69,458ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಹಾಗೂ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆಯಿಂದಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಇಳಿಕೆ ಕಂಡಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT