ಪ್ರಾತಿನಿಧಿಕ ಚಿತ್ರ
ನವದೆಹಲಿ: ದೇಶೀಯ ಆಭರಣ ತಯಾರಿಕರಿಂದ ಹೆಚ್ಚಿದ ಬೇಡಿಕೆಯಿಂದಾಗಿ ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನದ ಧಾರಣೆಯು ಏರಿಕೆಯಾಗಿದೆ.
10 ಗ್ರಾಂ ಚಿನ್ನದ ಬೆಲೆ ₹550 ಏರಿಕೆಯಾಗಿದ್ದು, ₹71,600ರಂತೆ ಮಾರಾಟವಾಗಿದೆ. ಬೆಳ್ಳಿ ದರವು ಯಥಾಸ್ಥಿತಿಯಲ್ಲಿದ್ದು, ಕೆ.ಜಿ ಬೆಳ್ಳಿ ಧಾರಣೆ ₹84,500 ಆಗಿದೆ.
ಬ್ಯಾಂಕ್ ಆಫ್ ಜಪಾನ್ ಮತ್ತು ಅಮೆರಿಕದ ಕೇಂದ್ರೀಯ ಬ್ಯಾಂಕ್ ಆದ ಫೆಡರಲ್ ರಿಸರ್ವ್‌ನ ಹಣಕಾಸು ನೀತಿ ಸಮಿತಿ ಸಭೆಯ ನಿರ್ಧಾರವು ಬುಧವಾರ ಪ್ರಕಟವಾಗಲಿದೆ. ಇದು ಹಳದಿ ಲೋಹದ ಬೆಲೆಯ ಏರಿಳಿತಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.