ಪ್ರಾತಿನಿಧಿಕ ಚಿತ್ರ
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಚಿನ್ನದ ಧಾರಣೆಯಲ್ಲಿ ಭಾರಿ ಇಳಿಕೆಯಾಗಿದೆ.
10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹3,400 ಕಡಿಮೆಯಾಗಿ, ₹96,550ರಂತೆ ಮಾರಾಟವಾಗಿದೆ. ಆಭರಣ ಚಿನ್ನವು ಇಷ್ಟೇ ಪ್ರಮಾಣದಲ್ಲಿ ಇಳಿಕೆಯಾಗಿ, ₹96,100 ಆಗಿದೆ.
ಬೆಳ್ಳಿ ದರವು ಕೆ.ಜಿಗೆ ₹200 ಕಡಿಮೆಯಾಗಿ, ₹99,700 ಆಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. ಹೀಗಾಗಿ ದೇಶದ ಮಾರುಕಟ್ಟೆಯಲ್ಲೂ ದರ ಇಳಿದಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
2024ರ ಜುಲೈ 23ರಂದು ಚಿನ್ನದ ದರ ₹3,350 ಇಳಿಕೆಯಾಗಿತ್ತು.
ಚೀನಾದ ಸರಕುಗಳ ಆಮದು ಮೇಲೆ 90 ದಿನದವರೆಗೆ ಅಮೆರಿಕ ಸುಂಕ ರದ್ದು ಮಾಡಿದೆ. ಇದರಿಂದ ಹೂಡಿಕೆದಾರರು ಹಳದಿ ಲೋಹದ ಖರೀದಿಯಿಂದ ಹಿಂದೆ ಸರಿದರು. ಇದು ಚಿನ್ನದ ಬೆಲೆ ಇಳಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.