ADVERTISEMENT

ಬಿಎಸ್‌ಎನ್‌ಎಲ್‌ ಪುನಶ್ಚೇತನ: ಸಮಿತಿ ರಚನೆ

ಪಿಟಿಐ
Published 28 ಡಿಸೆಂಬರ್ 2019, 19:46 IST
Last Updated 28 ಡಿಸೆಂಬರ್ 2019, 19:46 IST
   

ನವದೆಹಲಿ: ಬಿಎಸ್‌ಎನ್‌ಎಲ್‌ ಮತ್ತು ಎಂಟಿಎನ್‌ಎಲ್‌ನ ಪುನಶ್ಚೇತನ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಲು ಅನುಕೂಲ ಆಗುವಂತೆ ಉನ್ನತ ಮಟ್ಟದ ಸಚಿವರ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.

ಸರ್ಕಾರಿ ಸ್ವಾಮ್ಯದ ಎರಡೂ ಕಂಪನಿಗಳ ಪುನಶ್ಚೇತನಕ್ಕೆ ₹ 60 ಸಾವಿರ ಕೋಟಿಯ ಯೋಜನೆ ರೂಪಿಸಲಾಗಿದೆ. ಇದನ್ನು ಜಾರಿಗೊಳಿಸಲು ಏಳು ಸದಸ್ಯರನ್ನು ಒಳಗೊಂಡಿರುವ ಸಮಿತಿಯು ನೆರವಾಗಲಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್‌, ಐ.ಟಿ ಸಚಿವ ರವಿಶಂಕರ್‌ ಪ್ರಸಾದ್‌, ಗೃಹ ಸಚಿವ ಅಮಿತ್‌ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ವಾಣಿಜ್ಯ ಸಚಿವ ಪೀಯೂಷ್‌ ಗೋಯಲ್‌, ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ಸಮಿತಿಯಲ್ಲಿ ಇರಲಿದ್ದಾರೆ. 4ಜಿ ಸ್ಪೆಕ್ಟ್ರಂ ಹಂಚಿಕೆ, ಸಿಬ್ಬಂದಿ, ಬಾಂಡ್‌ ವಿತರಣೆ, ನಗದೀಕರಣದಂತಹ ವಿಷಯಗಳ ಬಗ್ಗೆ ಸಮಿತಿಯು ನಿರ್ಧಾರ ಕೈಗೊಳ್ಳಲಿದೆ.

ADVERTISEMENT

ಎರಡೂ ಕಂಪನಿಗಳಿಂದ ಒಟ್ಟಾರೆ 92,700 ಸಿಬ್ಬಂದಿ ವಿಆರ್‌ಎಸ್‌ ಆಯ್ಕೆ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.