ADVERTISEMENT

54,760 ಟನ್‌ ಈರುಳ್ಳಿ ರಫ್ತಿಗೆ ಅನುಮತಿ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2024, 15:52 IST
Last Updated 22 ಫೆಬ್ರುವರಿ 2024, 15:52 IST
   

ನವದೆಹಲಿ: ಕೇಂದ್ರ ಸರ್ಕಾರವು ಬಾಂಗ್ಲಾದೇಶ, ಮಾರಿಷಸ್‌, ಬಹರೇನ್‌ ಹಾಗೂ ಭೂತಾನ್‌ಗೆ ಒಟ್ಟು 54,760 ಟನ್‌ ಈರುಳ್ಳಿ ರಫ್ತು ಮಾಡಲು ವ್ಯಾಪಾರಿಗಳಿಗೆ ಅನುಮತಿ ನೀಡಿದೆ.

‘ಮಾರ್ಚ್‌ 31ರ ವರೆಗೆ ನಿಗದಿಪಡಿಸಿರುವ ಪ್ರಮಾಣದಷ್ಟು ಈರುಳ್ಳಿ ರಫ್ತಿಗೆ ಮಾತ್ರವೇ ಅನುಮತಿ ನೀಡಲಾಗಿದೆ. ದ್ವಿಪಕ್ಷೀಯ ಒಪ್ಪಂದದ ಅನ್ವಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಶಿಫಾರಸ್ಸಿನ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ರೋಹಿತ್‌ ಕುಮಾರ್‌ ಸಿಂಗ್‌ ಅವರು, ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT